ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಮೆರಿಕಾದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿದ್ದು, ಕೊರೋನಾ ಲಸಿಕೆ ಹಾಕಿಸಿಕೊಂಡ ಜನರು ಇನ್ನು ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ಸೂಚಿಸಿದೆ.
ಈ ನಿಯಮ ಹೊರಾಂಗಣ ಮತ್ತು ಒಳಾಂಗಣ ಎರಡೂ ಕಡೆ ಅನ್ವಯವಾಗಲಿದೆ. ಇದೊಂದು ಬಹಳ ದೊಡ್ಡ ಮೈಲಿಗಲ್ಲು. ಅಮೆರಿಕನ್ನರಿಗೆ ಬೇಗ ಲಸಿಕೆ ಪಡೆಯಲು ಸಾಧ್ಯವಾಗಿದ್ದರಿಂದ ಇಂತಹದೊಂದು ಯಶಸ್ಸು ಸಾಧ್ಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಹೇಳಿದ್ದಾರೆ.
ಸಿಡಿಸಿ ಸಲಹೆಯ ಬೆನ್ನಲ್ಲೇ ಜೋ ಬಿಡನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾಸ್ಕ್ ಧರಿಸದೆಯೇ ಶ್ವೇತಭವನದ ರೋಸ್ ಗಾರ್ಡನ್ನಲ್ಲಿ ಸುದ್ದಿಗಾರರ ಮುಂದೆ ಹಾಜರಾಗಿದ್ದಾರೆ.
ಸಂಪೂರ್ಣವಾಗಿ ಕೊರೋನಾ ಲಸಿಕೆ ಹಾಕಿಸಿಕೊಂಡ ಜನರು, ಮಾಸ್ಕ್ ಧರಿಸದೇ ಅಥವಾ ದೈಹಿಕ ಅಂತರ ಕಾಪಾಡಿಕೊಳ್ಳದೇ ಚುಟುವಟಿಕೆಗಳನ್ನು ಪುನರಾರಂಭಿಸಬಹುದು. ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರಿಗೆ ಕೊರೋನಾ ಸೋಂಕು ತಗುಲುವ ಅಪಾಯ ಕಡಿಮೆ ಇರುತ್ತದೆ ಎಂದು ಸಿಡಿಸಿ ಮಾರ್ಗಸೂಚಿಯನ್ನು ಉಲ್ಲೇಖಿಸಿ ಬಿಡನ್ ಹೇಳಿದ್ದಾರೆ.
Big news from the CDC: If you’re fully vaccinated, you do not need to wear a mask – indoors or outdoors, in most settings.
We’ve gotten this far. Whether you choose to get vaccinated or wear a mask, please protect yourself until we get to the finish line. pic.twitter.com/XI4yPmhWaD
— The White House (@WhiteHouse) May 13, 2021