ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು 2023ರ ಜುಲೈ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೊಮ ಸರ್ಟಿಫಿಕೇಟ್, ಸರ್ಟಿಫಿಕೇಟ್ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2023ರ ಜುಲೈ ಅವಧಿಗೆ ನೋಂದಣಿ ಮಾಡಿಕೊಳ್ಳುವ ಅಭ್ಯರ್ಥಿಗಳು, ಅಧಿಕೃತ ವೆಬ್‌ಸೈಟ್ http://www.ignou.ac.in ಅಥವಾ https://ignouadmission.samarth.edu.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 30, 2023ರರೊಳಗೆ ಅರ್ಜಿ ಹಾಕಬಹುದು.
ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು. ಮತ್ತು ನೆಟ್ ಬ್ಯಾಕಿಂಗ್ ಮೂಲಕ ಆನ್‌ಲೈನ್‌ಲ್ಲಿ ಶುಲ್ಕವನ್ನು ಪಾವತಿಸಬಹುದಾಗಿದೆ ಎಂದು ಇಗ್ನೊ ತಿಳಿಸಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಇಗ್ನೊ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ನೀಡುತ್ತದೆ.