spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೊಲೀಸ್ ಠಾಣೆಗಳಲ್ಲಿ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ: ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಬಂದಿದ್ದು, ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.
ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.
ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಘಟಕಾಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss