Sunday, March 26, 2023

Latest Posts

ಐಐಟಿ ಮದ್ರಾಸ್‌ನಲ್ಲಿ ಬಿ.ಟೆಕ್‌ ವಿದ್ಯಾರ್ಥಿ ಆತ್ಮಹತ್ಯೆ : ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಐಐಟಿ-ಮದ್ರಾಸ್‌ನ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್‌ ರೂಂ ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ನಿವಾಸಿಯಾಗಿರುವ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ 20 ವರ್ಷದ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಸಹಪಾಠಿಗಳು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ವಿದ್ಯಾರ್ಥಿ ಅಧ್ಯಯನದ ಮೇಲೆ ಕೇಂದ್ರೀಕರಿಸಲು ಮತ್ತು ಶೈಕ್ಷಣಿಕ ಕಾರ್ಯಗಳನ್ನು ಪೂರ್ಣಗೊಳಿಸಲು ವಿಫಲವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖೆ ಮತ್ತು ಶವಪರೀಕ್ಷೆ ಪೂರ್ಣಗೊಂಡ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದಿದ್ದಾರೆ.

ಫೆಬ್ರವರಿ 14 ರಂದು ಐಐಟಿ ಮದ್ರಾಸ್‌ನಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳಲ್ಲೇ ಈ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!