Friday, August 19, 2022

Latest Posts

ಬೆಂಗಳೂರಿನ ಐಐಎಸ್ಸಿ ಈಗ ದೇಶದ ಎರಡನೇ ಅತ್ಯುತ್ತಮ ಸಂಶೋಧನಾ ಸಂಸ್ಥೆ! ಮದ್ರಾಸ್ ವಿವಿ’ಗೆ ಅಗ್ರಸ್ಥಾನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಮತ್ತು ಅತ್ಯುತ್ತಮ ಸಂಶೋಧನಾ ಸಂಸ್ಥೆಯಾಗಿ ಬೆಂಗಳೂರಿನ ಐಐಎಸ್ಐ ಪಾತ್ರವಾಗಿದೆ. ದೇಶದ ಅತ್ಯುತ್ತಮ ಸಂಸ್ಥೆಗಳಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್‌, ಅಗ್ರಸ್ಥಾನ ಪಡೆದಿದೆ.

  • ನ್ಯಾಷನಲ್‌ ಇನ್‌ಸ್ಟಿಟ್ಯೂಷನಲ್‌ ರ‍್ಯಾಂಕಿಂಗ್‌ ಫ್ರೇಮ್‌ವರ್ಕ್ ಪ್ರಕಟಗೊಂಡಿದ್ದು, ದೇಶದ ಸಂಶೋಧನಾ ಸಂಸ್ಥೆಗಳಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಎರಡನೇ ಸ್ಥಾನ ಪಡೆದುಕೊಂಡಿದೆ.
  • ವೈದ್ಯಕೀಯ ವಿಭಾಗದಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ಗೆ 4ನೇ ಸ್ಥಾನ, ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜಿಗೆ 10ನೇ ಸ್ಥಾನ ದೊರೆತಿದೆ.
  • ದಂತ ವೈದ್ಯಕೀಯ ಕಾಲೇಜು ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಉಡುಪಿಯ ಮಣಿಪಾಲ ದಂತ ವೈದ್ಯಕೀಯ ಕಾಲೇಜು ಮೊದಲ ಸ್ಥಾನದಲ್ಲಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು 6ನೇ ಸ್ಥಾನ, ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜು 7ನೇ ಸ್ಥಾನ ಅಲಂಕರಿಸಿದೆ.
  • ಕಾನೂನು ಶಿಕ್ಷಣ ವಿಭಾಗದಲ್ಲಿ ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿ ಮೊದಲ ಸ್ಥಾನದಲ್ಲಿದ್ದು, ‘ಬಿ-ಸ್ಕೂಲ್‌’ ವಿಭಾಗದಲ್ಲಿ ಬೆಂಗಳೂರಿನ ಭಾರತೀಯ ನಿರ್ವಹಣಾ ಸಂಸ್ಥೆಯು (ಐಐಎಂ) ಎರಡನೇ ಸ್ಥಾನದಲ್ಲಿದೆ.
  • ಫಾರ್ಮಸಿ ಕಾಲೇಜು ವಿಭಾಗದಲ್ಲಿ ಉಡುಪಿಯ ಮಣಿಪಾಲ ಕಾಲೇಜ್‌ ಆಫ್‌ ಫಾರ್ಮಾಸಿಟಿಕಲ್ ಸೈನ್ಸ್ ಮತ್ತು ಮೈಸೂರಿನ ಜೆಎಸ್‌ಎಸ್‌ ಕಾಲೇಜ್‌ ಆಫ್‌ ಫಾರ್ಮಸಿ ಕ್ರಮವಾಗಿ 7 ಮತ್ತು 8ನೇ ಸ್ಥಾನದಲ್ಲಿವೆ.
  • ಅತ್ಯುತ್ತಮ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಬೆಂಗಳೂರಿನ ಐಐಎಸ್ಸಿ ಮೊದಲ ಸ್ಥಾನದಲ್ಲಿದ್ದು, ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಏಳನೇ ಸ್ಥಾನದಲ್ಲಿದೆ.
  • ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) 10ನೇ ಸ್ಥಾನ ಪಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!