ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.
ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು.
ನನ್ನ ಜೀವನದಲ್ಲಿ ಏನೂ ಇರಲಿಲ್ಲ ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಎಲ್ಲವೂ ದೈವಿಕ ತಾಯಿ ಮೂಕಾಂಬಿಕೆಯ ಕೃಪೆ ಮತ್ತು ಆಶೀರ್ವಾದದಿಂದ ನಡೆದಿದೆ ಎಂದು ಇಳಯರಾಜ ಹೇಳಿದರು.
ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು. ಇಳಯರಾಜ ಅವರ ಮಗ ಕಾರ್ತಿಕ್ ಇಳಯರಾಜ, ಮೊಮ್ಮಗ ಯತೀಶ್ ಇಳಯರಾಜ ಮತ್ತು ಇತರರು ಉಪಸ್ಥಿತರಿದ್ದರು.