ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ತಿಂಗಳ ಹಿಂದೆ ಮದುವೆಯಾಗದೆ ಗರ್ಭಿಣಿಯಾಗಿರುವುದಾಗಿ ಘೋಷಿಸಿ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದ ಸ್ಟಾರ್ ಹೀರೋಯಿನ್ ಇಲಿಯಾನಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಗುವಿನ ಫೋಟೋ ಹಂಚಿಕೊಂಡಿದ್ದಾರೆ ಮತ್ತು ಪ್ರೀತಿಯ ಸಂಕೇತದೊಂದಿಗೆ “ಡೇಟ್ ನೈಟ್” ಎಂದು ಶೀರ್ಷಿಕೆ ನೀಡಿದ್ದಾರೆ.
ಆಗಸ್ಟ್ 1 ರಂದು ಇಲಿಯಾನಾ ಗಂಡು ಮಗುವಿಗೆ ಜನ್ಮ ನೀಡಿದ್ದರೂ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ. ತನ್ನ ಗಂಡು ಮಗುವಿಗೆ ‘ಕೋವಾ ಫೀನಿಕ್ಸ್ ಡೋಲನ್’ ಎಂದು ನಾಮಕರಣ ಮಾಡಿರುವುದಾಗಿ ಘೋಷಿಸಿದರು. ಈ ಹೆಸರು ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ, ಆದರೆ ನೆಟ್ಟಿಗರು ಮಗು ಕ್ಯೂಟ್ ಎಂದು ಕಮೆಂಟ್ ಮಾಡುತ್ತಿದ್ದಾರೆ. ತನ್ನ ಮಗುವಿನ ಫೋಟೋವನ್ನು ಶೇರ್ ಮಾಡುತ್ತಾ.. ನಾವು ಈಗ ಎಷ್ಟು ಖುಷಿಯಾಗಿದ್ದೇವೆ ಎಂದು ಹೇಳಲು ಸಾಧ್ಯವಿಲ್ಲ. ನನ್ನ ಮಗುವನ್ನು ಈ ಜಗತ್ತಿಗೆ ಸ್ವಾಗತ ಎಂದು ಪೋಸ್ಟ್ ಮಾಡಿದ್ದಾರೆ.
ಅಭಿಮಾನಿಗಳು, ನೆಟ್ಟಿಗರು ಮತ್ತು ಅನೇಕ ಸೆಲೆಬ್ರಿಟಿಗಳು ಅಭಿನಂದನೆಗಳನ್ನು ಹೇಳುತ್ತಿದ್ದಾರೆ.