ಹೊಸದಿಗಂತ ಡಿಜಿಟಲ್ ಡೆಸ್ಕ್:
ಜು.15ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆದಿದೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ, ಮಾಜಿ ಡಿಸಿಎಂ ಡಾ.ಅಶ್ವಥ್ ನಾರಾಯಣ, ಸುರೇಶ್ ಬಾಬು, ಶಾರದಾ ಪೂರ್ಯಾ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಂಟಿ ಹೋರಾಟದ ಯೋಜನೆಗಳ ಕುರಿತು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆಸಲಾಗಿದೆ.
ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಮುಖ್ಯಮಂತ್ರಿಯಿಂದಲೇ ಕಾನೂನು ಬಾಹಿರ ಚಟುವಟಿಕೆ ಆಗಿದೆ. ಎಷ್ಟು ಜನ ಭೂಮಿ ಕಳೆದುಕೊಂಡವರಿಗೆ ಇವರ ಸರ್ಕಾರದಲ್ಲಿ ಪರಿಹಾರ ಕೊಟ್ಟಿದ್ದಾರೆ? ಇದೆ ರೀತಿಯಾದ ಎಲ್ಲಾ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.