ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ಡಿಕೆಶಿ ವಿರುದ್ಧದ ಕೇಸ್ ಅನ್ನು ಲೋಕಾಯುಕ್ತಕ್ಕೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮಾಡಿದ್ದ ಆದೇಶ ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದೆ. ಕ್ಯಾಬಿನೆಟ್ ಆದೇಶದ ಮೇರೆಗೆ ಡಿಕೆಶಿ ಪ್ರಕರಣ ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ ನೀಡಿತ್ತು.
ಡಿ.22 ರಂದು ಲೋಕಾಯುಕ್ತ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಪ್ರತಿ ಪಡೆದು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸಿಬಿಐ ಮನವಿ ಮಾಡುವ ಸಾಧ್ಯತೆ ಇದೆ.
ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ನಡೆಯಲಿದೆ.