Tuesday, March 28, 2023

Latest Posts

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ (DK Shivakumar‌) ಬಿಗ್ ರಿಲೀಫ್ ಸಿಕ್ಕಿದೆ.

ಸಿಬಿಐ ಕೋರ್ಟ್ ನಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾಖಲಾಗಿದ್ದಂತ ಪ್ರಕರಣಕ್ಕೆ, ಹೈಕೋರ್ಟ್ ಫೆ.24ರವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

ಇಂದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅವರ ಪರ ಹಿರಿಯ ವಕೀಲ ಸಿ ಹೆಚ್ ಜಾಧವ್ ಅವರು, ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ತೊಂದರೆ ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್ ಪುತ್ರಿಗೂ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿಸಿದರು.ಮಾನಸಿಕ ಹಿಂಸೆ ಕೊಡಬೇಕು ಅಂತಲೇ ಈ ರೀತಿ ಮಾಡಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಅವರ ಮಗಳು ಚುನಾವಣೆ ಸ್ಪರ್ಧೆ ಮಾಡುತ್ತಿಲ್ಲ ಅಲ್ವಾ? ವಿಚಾರಣೆಗೆ ಹಾಜರಾಗಲು ತೊಂದರೆ ಏನಿದೆ? ವಿಚಾರಣೆಗೆ ಸಹಕರಿಸಬೇಕು ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿ, ಡಿಕೆಶಿ ಅವರ ಮಗಳ ಹೆಸರಿನಲ್ಲಿ 150 ಕೋಟಿ ರೂ. ಆಸ್ತಿ ಇದೆ. ಅದರ ಮೌಲ್ಯ ಏನು ಅಂತ ತಿಳಿದುಕೊಳ್ಳಬೇಕು. ತನಿಖೆ ಇನ್ನೂ 6 ತಿಂಗಳು ನಡೆಯಲಿದೆ. ಬಳಿಕ ಅಂತಿಮ ವರದಿ ಸಲ್ಲಿಸಬೇಕು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!