ಅಕ್ರಮ ಗೋಮಾಂಸ ಸಾಗಾಟ: ಪ್ರಮುಖ ಆರೋಪಿ ಬಂಧನ

ಹೊಸದಿಗಂತ ವರದಿ, ಮಡಿಕೇರಿ:

ನಾಪೋಕ್ಲು ಸಮೀಪದ ಚೋನಾಕೆರೆ ಎಂಬಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ನಾಪೋಕ್ಲು ಸಮೀಪದ ಚೋನಾಕೆರೆ ಎಂಬಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಸ್ಸಾಂ ಮೂಲದ ಚಾನ್ಮಿಯಾ ಅಲಿ (27) ಎಂಬಾತನನ್ನು ನಾಪೋಕ್ಲು ಪೊಲೀಸರು ಗುರುವಾರ ಬಂಧಿಸಿದ್ದು,‌ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನೇತೃತ್ವದಲ್ಲಿ ನಾಪೋಕ್ಲು ಠಾಣಾಧಿಕಾರಿ ಸದಾಶಿವ, ಸಿಬ್ಬಂದಿಗಳಾದ ರವಿಕುಮಾರ್, ಲವ, ಸಾಜನ್, ಶರತ್, ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!