ಅಕ್ರಮ ಗೋಮಾಂಸ ವ್ಯಾಪಾರ: ಅಕ್ರಮವಾಗಿ ನಿರ್ಮಿಸಿದ್ದ ಮನೆಗಳು ನೆಲಸಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಅಕ್ರಮ ಗೋಮಾಂಸ ದಂಧೆಯನ್ನು ಹತ್ತಿಕ್ಕುವ ಭಾಗವಾಗಿ ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 11 ಮನೆಗಳನ್ನು ಸ್ಥಳೀಯ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಲಾದ ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಸುಗಳನ್ನು ಸಾಕಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ರಜತ್ ಸಕ್ಲೇಚಾ ತಿಳಿಸಿದ್ದಾರೆ.

ಮಾಹಿತಿ ಪಡೆದ ತಕ್ಷಣ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿದೆ. ಈ ವೇಳೆ ಮನೆಗಳ ಹಿತ್ತಲಲ್ಲಿ ಹಸುಗಳನ್ನು ಕಟ್ಟಲಾಗಿತ್ತು. ಕೂಡಲೇ 150 ಹಸುಗಳನ್ನು ಜಪ್ತಿ ಮಾಡಿದೆವು. ಮನೆಯ ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಲಾಗಿದ್ದ ಗೋಮಾಂಸವನ್ನೂ ವಶಪಡಿಸಿಕೊಳ್ಳಲಾಗಿದೆ. ಕೋಣೆಯಲ್ಲಿ ಪ್ರಾಣಿಗಳ ಕೊಬ್ಬು, ಹಸುವಿನ ಚರ್ಮ ಮತ್ತು ಮೂಳೆಗಳು ಸಹ ಪತ್ತೆಯಾಗಿವೆ ಎಂದು ಅವರು ಹೇಳಿದರು.

ವಶಪಡಿಸಿಕೊಂಡ ಮಾಂಸವು ಗೋಮಾಂಸ ಎಂದು ಸ್ಥಳೀಯ ಪಶುವೈದ್ಯರು ಖಚಿತಪಡಿಸಿದ್ದಾರೆ. ವಶಪಡಿಸಿಕೊಂಡ ಮಾದರಿಗಳನ್ನು ಡಿಎನ್‌ಎ ಪರೀಕ್ಷೆಗಾಗಿ ಹೈದರಾಬಾದ್‌ಗೆ ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಜಮೀನಿನಲ್ಲಿದ್ದ ಕಾರಣ ಅವುಗಳನ್ನು ನೆಲಸಮಗೊಳಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!