ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
1xಬೆಟ್ ಹೆಸರಿನ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ.
ಅದರಂತೆ ಸೆ.22ಕ್ಕೆ ರಾಬಿನ್ ಉತ್ತಪ್ಪ, ಸೆ.23ಕ್ಕೆ ಯುವರಾಜ್ ಸಿಂಗ್ (Yuvraj Singh) ಹಾಗೂ ಸೆ.24ಕ್ಕೆ ನಟ ಸೋನು ಸೂದ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಇತ್ತೀಚಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ 8 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು ಎಂದು ತಿಳಿದುಬಂದಿದೆ.