Monday, November 10, 2025

ಅಕ್ರಮ ಬೆಟ್ಟಿಂಗ್ ಆ್ಯಪ್ ಕೇಸ್: ಇಡಿ ವಿಚಾರಣೆಗೆ ಹಾಜರಾದ ಯುವರಾಜ್ ಸಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು (ಸೆ.23) ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಇದು 1xBet ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದ್ದು, ಸೆ.16ರಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರಿಗೆ ಇಡಿ ಸಮನ್ಸ್ ಜಾರಿಮಾಡಿತ್ತು. ಇಂದು ಯುವರಾಜ್ ಸಿಂಗ್ ವಿಚಾರಣೆಗೆ ಹಾಜರಾದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸೋಮವಾರ (ಸೆ.22) ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಕೂಡ ಇಡಿ ವಿಚಾರಣೆಗೆ ಹಾಜರಾಗಿದ್ದರು.

ಏನಿದು ಕೇಸ್?
ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

error: Content is protected !!