May 18, 2026
Monday, May 18, 2026
spot_img

ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ: ದೆಹಲಿಯಲ್ಲಿ ಕಲ್ಲುತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಧಾನಿ ದೆಹಲಿಯಲ್ಲಿ ಬೃಹತ್‌ ಬುಲ್ಡೋಜರ್‌ ಕಾರ್ಯಾಚರಣೆ ನಡೆದಿದೆ.

ಇದೇ ಜನವರಿ 6 ಮತ್ತು 7ರ ಮಧ್ಯರಾತ್ರಿ (ಬುಧವಾರ ರಾತ್ರಿ) 1 ಗಂಟೆ ಸುಮಾರಿಗೆ ದೆಹಲಿಯ ತುರ್ಕಮನ್‌ ಗೇಟ್‌ನಲ್ಲಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದಿದೆ. ದೆಹಲಿ ಹೈಕೋರ್ಟ್‌ ಆದೇಶದಂತೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಅಧಿಕಾರಿಗಳು ಮಸೀದಿ ಮತ್ತು ಸುತ್ತಮುತ್ತಲಿನ ಕಟ್ಟಡಗಳನ್ನ ಧ್ವಂಸಗೊಳಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಬುಲ್ಡೋಜರ್‌ಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.

ಪಾಲಿಕೆ ಅಧಿಕಾರಿಗಳ ಈ ಕಾರ್ಯಾಚರಣೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ವಿರೋಧಿಸಿದ್ದಾರೆ. ತೆರವು ಕಾರ್ಯಾಚರಣೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿ ಪ್ರತಿಭಟಿಸಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚಿನ ಪೊಲೀಸ್‌ ಭದ್ರತೆಯನ್ನ ನಿಯೋಜಿಸಲಾಗಿದೆ.

ಇನ್ನೂ ಕಲ್ಲುತೂರಾಟದ ವೇಳೆ ನಡೆದ ಘರ್ಷಣೆಯಲ್ಲಿ ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಡಿಸಿಪಿ ತಿಳಿಸಿದ್ದಾರೆ. ಘಟನೆಗೆ ಕಾರಣರಾದವರನ್ನ ಗುರುತಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !