ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಡಿಕೇರಿ:
ಗಾಂಜಾ ಸೇರಿದಂತೆ ಅಕ್ರಮವಾಗಿ ಮಾದಕ ವಸ್ತುಗಳನ್ನು ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳ ಸಹಿತ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವೀರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ಅಂತಿಮ ವರ್ಷದ ಬಿಬಿಎಂ ವಿದ್ಯಾಥಿ, ಕೊಟ್ಟಮುಡಿಯ ನಿವಾಸಿ ಮೊಹಮ್ಮದ್ ಅಸ್ಲಾಂ ( 23 ವರ್ಷ) ಮಡಿಕೇರಿ ಎಫ್ ಎಂಸಿ ಕಾಲೇಜಿನ ಅಂತಿಮ ವರ್ಷದ ಹೆಚ್ ಆರ್ ಡಿ ವಿದ್ಯಾರ್ಥಿ, ಬೇತು ಗ್ರಾಮದ ಕೆ.ಕೆ. ಬೋಪಣ್ಣ ( 22 ), ಮಡಿಕೇರಿ ಎಸ್.ಬಿಐ ಉದ್ಯೋಗಿ, ಚೈನ್ ಗೇಟ್ ಪೋಸ್ಟಲ್ ಕ್ವಾಟ್ರಸ್ ನಿವಾಸಿ ಸುಮಂತ್ ಅಲಿಯಾಸ್ ಅಣ್ಣ(22), ಬೇತು ಗ್ರಾಮದ ಸಿ.ಸಿ. ಅಕ್ಷಿತ್ ಅಲಿಯಾಸ್ ಚಿಟ್ಟಿಯಪ್ಪ(24) ಹಾಗೂ ಮಡಿಕೇರಿ ಪುಟಾಣಿ ನಗರ ನಿವಾಸಿ ರಾಜೇಶ(22) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಒಟ್ಟು 1.26ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 750 ಗ್ರಾಂ. ಗಾಂಜಾ, 11.970 ಗ್ರಾಂ-AMPHETAMINE, 0.800 ಮಿಲಿ ಗ್ರಾಂ- ECSTASY ಹಾಗೂ ಎರಡು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ: ಮಡಿಕೇರಿ ನಗರ ಪೊಲೀಸ್ ಠಾಣಾ ಸರಹದ್ದಿನ ಚೈನ್ಗೇಟ್ ಬಳಿಯ ಡಿ.ಎಫ್.ಓ. ಬಂಗ್ಲೆ ಹತ್ತಿರ 5 ಮಂದಿ ಅಕ್ರಮವಾಗಿ ಗಾಂಜಾ ಖರೀದಿಯ ವಿಚಾರದಲ್ಲಿ ಹಣ ಕಾಸಿನ ಬಗ್ಗೆ ಮಾತನಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ನಿರ್ದೇಶನದಂತೆ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಪಿ. ದಿನೇಶ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ನಗರ ವೃತ್ತದ ವೃತ್ತ ನಿರೀಕ್ಷಕ ಪಿ.ವಿ.ವೆಂಕಟೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಡಿಕೇರಿ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕಿ ಕು. ಅಂತಿಮಾ ಎಂ.ಟಿ, ಮಡಿಕೇರಿ ನಗರ ಪೊಲೀಸ್ ಠಾಣಾ ಅಪರಾಧ ಪತ್ತೆ ಕರ್ತವ್ಯದ ಸಿಬ್ಬಂದಿಗಳಾದ ಕೆ.ಕೆ.ದಿನೇಶ್, ಹೆಚ್.ಎಸ್.ಶ್ರೀನಿವಾಸ,.ಪ್ರವೀಣ್ ಬಿ.ಕೆ., ನಾಗರಾಜ್ ಕಡಗನ್ನವರ್, ಸಿಬ್ಬಂದಿಗಳಾದ ಅರುಣ್ ಕುಮಾರ್ ಬಿ.ಜಿ, ಸುನಿಲ್ ಬಿ.ಓ… ಧರ್ಮ ಕೆ.ಎಂ., ಎಲ್.ಎಸ್.ಶಶಿಕುಮಾರ್, ದಿವ್ಯಾ, ಸೌಮ್ಯ ಅವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.