October 10, 2026
Saturday, October 10, 2026
spot_img

ಕೃಷಿ ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ: 18 ಲಕ್ಷ ರೂ. ಮೌಲ್ಯದ ಹಸಿ ಗಾಂಜಾ ಗಿಡ ವಶ

ಹೊಸದಿಗಂತ ವರದಿ ಚಿತ್ರದುರ್ಗ:

ಅಕ್ರಮವಾಗಿ ಗಾಂಜಾ ಬೆಳೆದಿದ್ದ ಕೃಷಿ ಜಮೀನಿನ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ, 18 ಲಕ್ಷ ರೂ. ಮೌಲ್ಯದ 187 ಕೆ.ಜಿ. ತೂಕದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಗುಂತಕೋಲಮ್ಮನಹಳ್ಳಿ ಗ್ರಾಮದ ಜಿ. ಪಾಲಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದರು. ಈ ಕುರಿತು ಸೂಕ್ತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಜಮೀನಿನಲ್ಲಿ ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆಯ ಜೊತೆಗೆ ಗಾಂಜಾ ಬೆಳೆದಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.

ಈ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Must Read