ಅಕ್ರಮ ಗೋವುಗಳ ಸಾಗಾಟ: ಹಿಂದು ಕಾರ್ಯಕರ್ತರ ದಾಳಿ

ಹೊಸದಿಗಂತ ವರದಿ, ಕಲಬುರಗಿ:

ವಿಜಯಪುರದಿಂದ ಹೈದರಾಬಾದ್ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುತ್ತಿರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ, ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ಸುಮಾರು ೩೦ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಹಿಂದೂ ಕಾರ್ಯಕರ್ತರು ಅವುಗಳನ್ನು ರಕ್ಷಣೆ ಮಾಡಿ ಪೋಲಿಸರಿಗೆ ಒಪ್ಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!