ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಅಕ್ರಮ ಮದ್ಯ ನೀತಿಯ ಪರಿಣಾಮವಾಗಿ ರಾಜ್ಯದ ಬೊಕ್ಕಸಕ್ಕೆ 2,026 ಕೋಟಿ ರೂ ಆದಾಯ ನಷ್ಟವಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಬಹಿರಂಗಪಡಿಸಿದೆ.
ಮದ್ಯಪಾನ ನೀತಿಯಲ್ಲಿನ ಹಲವಾರು ಲೋಪದೋಷಗಳು ಮತ್ತು ಪರವಾನಗಿಗಳ ವಿತರಣೆಯಲ್ಲಿನ ಅಕ್ರಮಗಳನ್ನು ಮಾಧ್ಯಮಗಳು ವರದಿ ಮಾಡಿವೆ.
ಈ ಹಿಂದೆ ಕೇಜ್ರಿವಾಲ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್ ನಾಯಕರು ಕಿಕ್‌ಬ್ಯಾಕ್ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ.