BSY ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ಕೇಸ್ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಡಿನೋಟಿಫಿಕೇಷನ್ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಪೀಠವು ವಿಸ್ತೃತ ವಿಚಾರಣೆ ನಡೆಸಿತ್ತು. ಇಂದು ಈ ಬಗ್ಗೆ ತೀರ್ಪು ನೀಡಿದ ಪೀಠವು ಹಿಂದೆ ಎರಡು ಪ್ರಕರಣಗಳಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸುವ ಮೊದಲು ಪೂರ್ವಾನುಮತಿ ಪಡೆಯುವ ವಿಷಯದ ಬಗ್ಗೆ ವಿಭಿನ್ನ ತೀರ್ಪು ನೀಡಿವೆ.

ಈ ಹಂತದಲ್ಲಿ ಮತ್ತೊಂದು ತೀರ್ಪು ನೀಡುವುದು ಸೂಕ್ತವಲ್ಲ. ಹೀಗಾಗಿ, ಹೆಚ್ಚಿನ ವಿಚಾರಣೆಗಾಗಿ ನಾವು ವಿಸ್ತೃತ ಪೀಠಕ್ಕೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿತು.

ದ್ವಿಸದಸ್ಯ ಪೀಠವು ಏಪ್ರಿಲ್ 4ರಂದು ಬಿಎಸ್‌ವೈ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿತ್ತು. ಸಿಆರ್‌ಪಿಸಿ ಸೆಕ್ಷನ್ 156 (3) ಅಡಿಯಲ್ಲಿ ಪ್ರಕರಣದ ತನಿಖೆ ನಡೆದಿದೆಯೇ ಮತ್ತು ಈಗಲೂ ಕೂಡ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 17 ಎ ಅನುಸಾರ ಸೂಕ್ತ ಸರ್ಕಾರಿ ‍ಪ್ರಾಧಿಕಾರಗಳಿಂದ ಪೂರ್ವಾನುಮತಿಯ ಅಗತ್ಯವಿದೆಯೇ ಎಂಬುದು ಸೇರಿದಂತೆ ಹಲವು ಕಾನೂನಾತ್ಮಕ ಪ್ರಶ್ನೆಗಳನ್ನು ನ್ಯಾಯಪೀಠ ಕೇಳಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here