Friday, August 19, 2022

Latest Posts

ವಿದ್ಯುತ್ ಬಿಲ್ ನಲ್ಲಿ ಅಕ್ರಮ: ಮೂವರು ಬೆಸ್ಕಾಂ ಸಿಬ್ಬಂದಿಗಳನ್ನು ಅಮಾನತುಗೊಳಿಸಿದ ಸಚಿವ ಸುನೀಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ವಂಚಿಸುತ್ತಿದ್ದ ಮೂವರು ಬೆಸ್ಕಾಂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ, ಕಿರಿಯ ಸಹಾಯಕಿ ಸುಜಾತಮ್ಮ ಈ ಮೂವರು ಅಮಾನತುಗೊಂಡ ಸಿಬ್ಬಂದಿಗಳು.
ಗ್ರಾಹಕರಿಗೆ ವಿದ್ಯುತ್ ಬಿಲ್ ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟವುಂಟುಮಾಡುತ್ತಿದ್ದರು. ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿಗಳನ್ನು ಉಪಯೋಗಿಸಿ ವಂಚಿಸುತ್ತಿದ್ದರು. ಇವರ ವಿರುದ್ಧ ಕೋಲಾರ ಠಾಣೆಯಲ್ಲಿ ಎಫ್ ಐ ಆರ್ ಕೂಡ ದಾಖಲಾಗಿತ್ತು ಎಂದರು.
ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದರೂ ಸಹಿಸಲಲ್ಲ. ಅಕ್ರಮ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮೂವರು ಸಿಬ್ಬಂದಿಗಳನ್ನು ಅಮಾನತುಮಾಡಿ ಆದೇಶ ನೀಡಲಾಗಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!