ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಆರು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಗಡಿ ಭದ್ರತಾ ಪಡೆ (BSF) ಸಿಬ್ಬಂದಿ ಭಾನುವಾರ ಬಂಧಿಸಿದ್ದಾರೆ.
ಕೆಲವರು ಈ ಹಿಂದೆ ಮುಂಬೈನಲ್ಲಿ ಕೆಲಸ ಮಾಡಿದ್ದವರು ಇದ್ದಾರೆ. ಮತ್ತೆ ಉದ್ಯೋಗ ಅರಸಿ ಮುಂಬೈಗೆ ಹೋಗಲು ಬಾಂಗ್ಲಾದೇಶದಿಂದ ಮೇಘಾಲಯಕ್ಕೆ ಗಡಿ ದಾಟಿದ ನಂತರ ಅವರನ್ನು ಬಂಧಿಸಲಾಗಿದೆ.
ಬಿಎಸ್‌ಎಫ್ ಸಿಬ್ಬಂದಿಗಳು ಆರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ, ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯಿಂದ ನಾಲ್ವರು ಮತ್ತು ದಕ್ಷಿಣ ಗರೋ ಹಿಲ್ಸ್ ಜಿಲ್ಲೆಯಿಂದ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ತನ್ನ ಗಂಡನ ವೈದ್ಯಕೀಯ ಚಿಕಿತ್ಸೆಗಾಗಿ ಮುಂಬೈಗೆ ಭೇಟಿ ನೀಡಲು ಯೋಜಿಸಿದ್ದ ಮಹಿಳೆಯೂ ಸೇರಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಎಲ್ಲಾ ಆರು ಮಂದಿಯನ್ನು ಆಯಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.