ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮವಾಗಿ ಭಾರತ ಪ್ರವೇಶಿಸಿದ ಬಾಂಗ್ಲಾದೇಶದ ಮೂವರು ಮಹಿಳೆಯರನ್ನು ಮೇಘಾಲಯದಲ್ಲಿ ಬಂಧಿಸಲಾಗಿದೆ.
ಢಾಕಾದಿಂದ ಬಂದಿದ್ದ ಮಹಿಳೆಯರನ್ನು ಕಾಶಿ ಹಿಲ್ಸ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿ ದಾಟಿ ದಾಟಿ ಭಾರತದೊಳಗೆ ಪ್ರವೇಶಿಸಿದಾಗ ಅವರನ್ನು ಬಂಧಿಸಲಾಯಿತು ಎಂದು ಗಡಿ ಭದ್ರತಾ ಪಡೆ ಅಧಿಕಾರಿ ತಿಳಿಸಿದ್ದಾರೆ. ಮೂವರನ್ನು ವಶಕ್ಕೆ ಪಡೆದು ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಉದ್ಯೋಗಕ್ಕಾಗಿ ಭಾರತ ಪ್ರವೇಶಿಸಿದ್ದಾಗಿ ಮಹಿಳೆಯರು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಕಳೆದ ಗುರುವಾರ ರಾತ್ರಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ 9 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿತ್ತು. ಅವರಿಂದ ವಿವಿಧ ಸಿಮ್ ಕಾರ್ಡ್ ಹೊಂದಿದ್ದ 12 ಮೊಬೈಲ್ ಫೋನ್, ಭಾರತದ ಕರೆನ್ಸಿ, ಆಧಾರ್ ಕಾರ್ಡ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.