ಕೋರ್ಟ್‌ ಕಲಾಪ ಅಕ್ರಮ ಚಿತ್ರೀಕರಣ: ಕೇಜ್ರಿವಾಲ್‌ ಪತ್ನಿ ಸುನಿತಾ ವಿರುದ್ಧ ಹೈಕೋರ್ಟ್ ವಕೀಲ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ವಿರುದ್ಧ ಕಾನೂನುಬಾಹಿರವಾಗಿ ರೆಕಾರ್ಡ್ ಮಾಡಲಾದ ನ್ಯಾಯಾಲಯದ ಕಲಾಪಗಳ ಆಡಿಯೋ ಮತ್ತು ವಿಡಿಯೋ ರೆಕಾರ್ಡ್ ಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ದೆಹಲಿ ಹೈಕೋರ್ಟ್ ವಕೀಲ ವೈಭವ್ ಸಿಂಗ್ ಅವರು ದೂರು ದಾಖಲಿಸಿದ್ದಾರೆ.

ಜನರ ಸಹಾನುಭೂತಿ ಗಳಿಸಲು ಕೇಜ್ರಿವಾಲ್ ಅವರ ಪತ್ನಿ ಉದ್ದೇಶಪೂರ್ವಕವಾಗಿ ಕಲಾಪವನ್ನು ರೆಕಾರ್ಡ್‌ ಮಾಡಿದ್ದಾರೆಂದು ಸಿಂಗ್‌ ತಿಳಿಸಿದ್ದಾರೆ.

ಮಾ.28 ರಂದು ಕೇಜ್ರಿವಾಲ್‌ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರು ಪಡಿಸಿ, ವಿಚಾರಣೆ ನಡೆಸುವ ವೇಳೆ ಕಲಾಪವನ್ನು ರೆಕಾರ್ಡ್ ಮಾಡಿದ್ದು, ಅದನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!