BIG NEWS | ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 11 ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ.
ಹರ್ದಾ ಜಿಲ್ಲೆಯ ಬೈರಾಗಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ತೀವ್ರತೆಯ ಸ್ಫೋಟ ಇದಾಗಿದ್ದು, ಸುತ್ತಮುತ್ತ ಇದ್ದ 60ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಮನೆಯಲ್ಲಿದ್ದವರನ್ನೆಲ್ಲಾ ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೃತರ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!