ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಕ್ರಮವಾಗಿ ನಿರ್ಮಿಸಲಾದ ತಾತ್ಕಾಲಿಕ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡ ಘಟನೆ ನಡೆದಿದೆ.
ಹೈದರಾಬಾದ್ ನಗರದ ಲತೀಫಾಬಾದ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಪರವಾನಗಿ ಪಡೆಯದ ಪಟಾಕಿ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ.
ಲತಿಫಾಬಾದ್ ಪೊಲೀಸ್ ಠಾಣೆಯ ಲಘರಿ ಗೋಥ್ ನದಿಯ ದಡದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ ಎಂದು ರೆಸ್ಕ್ಯೂ 1122 ವಕ್ತಾರರು ಹೇಳಿಕೆ ನೀಡಿದ್ದು, ಇದುವರೆಗೆ ಏಳು ಶವಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ ಎಂದು ಹೇಳಿದ್ದಾರೆ.

