ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ 56 ವ್ಯಾಪಾರಿಗಳ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ.
ಅಕ್ಟೋಬರ್ 31 ಮತ್ತು ನವೆಂಬರ್ 1 ರ ನಡುವೆ ಬೆಂಗಳೂರಿನಾದ್ಯಂತ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ 56 ಕ್ಕೂ ಹೆಚ್ಚು ವ್ಯಾಪಾರಿಗಳು ನಿಯಮಗಳನ್ನು ಉಲ್ಲಂಘಿಸಿ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.
ಬೆಂಗಳೂರಿನ 72 ಸ್ಥಳಗಳಲ್ಲಿ ಪಟಾಕಿ ಮಾರಾಟಕ್ಕೆ 315 ಪರವಾನಗೆಗಳನ್ನು ತಾತ್ಕಾಲಿಕವಾಗಿ ನೀಡಲಾಗಿದೆ. ಪರವಾನಗಿ ಪಡೆಯದೇ ರಸ್ತೆ ಬದಿ ಹಾಗೂ ತಳ್ಳುವ ಗಾಡಿಗಳಲ್ಲಿ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಪತ್ತೆಯಾದ ನಂತರ ಮೊಕದ್ದಮೆ ದಾಖಲಿಸಲಾಗಿದೆ.