ಕೊಡಗಿನಲ್ಲಿ ಅಕ್ರಮ ಗಾಂಜಾ, MDMA ಮಾದಕ ವಸ್ತು ಮಾರಾಟ: ಆರೋಪಿಗಳು ಅರೆಸ್ಟ್

ಹೊಸದಿಗಂತ ಮಡಿಕೇರಿ:

ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ಗಾಂಜಾ ಹಾಗೂ ಎಂಡಿಎಂಎ MDMA ಮಾದಕ ವಸ್ತು ಮಾರಾಟ ಮಾಡುತಿದ್ದ ಮೂವರನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೇರಳದ ತಾಮರವೇರಿ ನಿವಾಸಿಗಳಾದ ಮಹಮ್ಮದ್ ಅಶ್ರಫ್ (19) ತಸ್ವೀಕ್ (24) ಅಲ್ಯಾಜ್.ಎ.ಟಿ, (27 ) ಎಂದು ಗುರುತಿಸಲಾಗಿದ್ದು, ಅವರಿಂದ 1 ಕೆ.ಜಿ 400 ಗ್ರಾಂ ಗಾಂಜಾ ಮತ್ತು 2 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ವೀರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೋಹನ್‌ ಕುಮಾರ್‌, ಗೋಣಿಕೊಪ್ಪ ವೃತ್ತನಿರೀಕ್ಷಕ ಶಿವರಾಜ ಮುಧೋಳ,ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬಿರಾದರ್ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಮೈಸೂರು-ವೀರಾಜಪೇಟೆ ಹೆದ್ದಾರಿ ರಸ್ತೆಯ ತಿತಿಮತಿಯಲ್ಲಿ ಆರೋಪಿಗಳನ್ನು ಬಂಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!