ನೆರೆ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ: ಎನ್‌ಸಿಬಿ ಅಧಿಕಾರಿಗಳಿಂದ 15.50 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಪೊಲೀಸರು ಹಾಗೂ ಎನ್ ಸಿಬಿ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೆರೆ ರಾಜ್ಯಕ್ಕೆ ಸಾಗಿಸುತ್ತಿದ್ದ 15.50 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್‌ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆಂಧ್ರಪ್ರದೇಶದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಟ್ರಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,596 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎನ್ ಸಿಬಿ ಮತ್ತು ಬೀದರ್ ಪೊಲೀಸರು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ.

ದಾಳಿ ವೇಳೆ ಒಟ್ಟು 1,596 ಕೆಜಿ ತೂಕದ ಅಕ್ರಮ ಗಾಂಜಾ ಪ್ಯಾಕೆಟ್‌ಗಳು ಪತ್ತೆಯಾಗಿದ್ದು, ಅಕ್ರಮ ಗಾಂಜಾ ಸಾಗಿಸುತ್ತಿದ್ದ ಚಾಲಕ ಮತ್ತು ಕ್ಲೀನರ್‌ಗಳನ್ನು ಬಂಧಿಸಲಾಗಿದೆ. ಎನ್‌ಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!