Wednesday, August 17, 2022

Latest Posts

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹೊಸದಿಗಂತ ವರದಿ, ವಿಜಯಪುರ:

ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, 58 ಸಾವಿರ ರೂ. ಮೌಲ್ಯದ 7 ಕೆಜಿ 977 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ವಿಜಯಪುರ ತಾಲೂಕಿನ ಡೋಮನಾಳದ ದೋಂಡಿಬಾ ಶೆಟ್ಟಿಬಾ ಜರಕ (32), ಗೋವಾದ ಆಕಾಶ ಅನಿಲ ಬೋರಕರ (20), ಯಲ್ಲಪ್ಪ ದಿಲೀಪ ಕರೆಪ್ಪನವರ (22) ಬಂಧಿತ ಆರೋಪಿಗಳು.

ಈ ಆರೋಪಿಗಳು ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಹಾಗೂ ತಹಶೀಲ್ದಾರ್ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!