ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ, ಆರೋಪಿ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಯತ್ನಿಸಿದ 49.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದೆ.

ಇಬ್ಬರೂ ಮಹಿಳೆಯರು ಸೋಮವಾರ ಸಂಜೆ (ಏ.29) ದುಬೈನಿಂದ ಇಂಡಿಗೋ ವಿಮಾನ 6E1486 ನಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದರು. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಮಹಿಳೆಯರ ಒಳ ಉಡುಪುಗಳಲ್ಲಿ 49.52 ಲಕ್ಷ ರೂ. ಮೌಲ್ಯದ 717 ಗ್ರಾಂ ಚಿನ್ನ ಪತ್ತೆಯಾಗಿದೆ.

ಇದೀಗ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!