ಅಕ್ರಮ ಕಾರ್ಮಿಕ ಕಾರ್ಡ್‌ ಸಂಖ್ಯೆ ಹೆಚ್ಚು: ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಶಿವರಾಮ ಹೆಬ್ಬಾರ್‌ ಭರವಸೆ

ಹೊಸದಿಗಂತ ವರದಿ, ಯಲ್ಲಾಪುರ:

ಕಾರ್ಮಿಕ ಇಲಾಖೆಯಲ್ಲಿ ಅಭಿವೃದ್ದಿ ಕಾರ್ಯಗಳು ಹೆಚ್ಚುತ್ತಿರುವಂತೆ ಅದರ ದುರಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದಲ್ಲಿ ಅಕ್ರಮ ಕಾರ್ಮಿಕ ಕಾರ್ಡ್‌ಗಳನ್ನು ಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸನ್ನದ್ಧವಾಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್‌ ಹೇಳಿದರು.
ಶನಿವಾರ ಪಟ್ಟಣದ ಅಡಿಕೆ ಭವನದಲ್ಲಿ ಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆರ್.ಪಿ.ಎಲ್‌. ತರಬೇತಿಯ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್‌, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ, ಪ್ರಮುಖರಾದ ವಿಜಯ ಮಿರಾಶಿ, ಮುರುಳಿ ಹೆಗಡೆ, ಬೆಳಗಾವಿ ಪ್ರಾದೇಶಿಕದ ಉಪಕಾರ್ಮಿಕ ಆಯುಕ್ತ ವೆಂಕಟೇಶ್‌ ಶಿಂದೆಹಟ್ಟಿ, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಶ್ವೇತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್‌ ಮುಲ್ಲಾ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ತರಬೇತಿ ಪಡೆದ ಕಟ್ಟಡ ಕಾರ್ಮಿಕರಿಗೆ ಸಾಂಕೇತಿಕವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!