Thursday, June 30, 2022

Latest Posts

ಕಳ್ಳಭಟ್ಟಿ ತಯಾರಿಸುತ್ತಿದ್ದ ಮಹಿಳೆ ಬಂಧನ: 4 ಲೀಟರ್ ಸಾರಾಯಿ ವಶ

ಹೊಸದಿಗಂತ ವರದಿ, ಕೊಡಗು:

ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಮಹಿಳೆಯೊಬ್ನರನ್ನು ವೀರಾಜಪೇಟೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂಟಿಯಂಗಡಿ ಗ್ರಾಮದ ನಿವಾಸಿ ಒಕ್ಕಲಿಗರ ವಾಸು ಎಂಬವರ ಲೈನ್ ಮನೆಯಲ್ಲಿ ವಾಸವಿರುವ ಮೀನಾ (52) ಬಂಧನಕ್ಕೊಳಗಾದ ಮಹಿಳೆಯಾಗಿದ್ದು, 4.05ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.
ಮಹಿಳೆಯ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿರುವುದಾಗಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಕಳ್ಳಭಟ್ಟಿ ಸಾರಾಯಿ ಮತ್ತು ಕಳ್ಳಭಟ್ಟಿ ತಯಾರಿಸಲು ಬಳಕೆ ಮಾಡಿದ ಒಂದು ಪ್ಲಾಸ್ಟಿಕ್ ಡ್ರಂ, ಎರಡು ಪಾತ್ರೆಗಳು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ಸಂಬಂಧ ಮಹಿಳೆ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದರೂ, ಹಿಂದಿನ ಚಾಳಿ ಬಿಡದೆ ಮತ್ತೆಮತ್ತೆ ಅಕ್ರಮದಲ್ಲಿ ಭಾಗಿಯಾಗುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೀರಾಜಪೇಟೆ ಉಪವಿಭಾಗ ಡಿವೈಎಸ್ಪಿ ಸಿ.ಟಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ವೃತ್ತ ನೀರಿಕ್ಷಕ ಬಿ.ಎಸ್.ಶ್ರೀಧರ್ ಅವರ ನೀರ್ದೆಶನದಲ್ಲಿ ವೀರಾಜಪೇಟೆ ಗ್ರಾಮಾಂತರ ಠಾಣೆಯ ಎ.ಎಸ್.ಐ. ಶ್ರೀಧರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ತೀರ್ಥಕುಮಾರ್, ನೆಹರುಕುಮಾರ್ ಮತ್ತು ಮಹಿಳಾ ಸಿಬ್ಬಂದಿ ಶಿಲ್ಪಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss