ಗೋವಾದಿಂದ ಅಕ್ರಮ ಮದ್ಯ ಸಾಗಾಟ: ಅನಮೋಡದಲ್ಲಿ ಓರ್ವನ ಬಂಧನ

ಹೊಸದಿಗಂತ ವರದಿ ಜೋಯಿಡಾ:

ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಮಾಲು, ವಾಹನ ಸಹಿತ ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ ಘಟನೆ ಜೋಯಿಡಾ ತಾಲ್ಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆಯ ಹತ್ತಿರ ನಡೆದಿರುವ ಬಗ್ಗೆ ಇಂದು ಗುರುವಾರ ಬೆಳಿಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.

ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡಿಕೊಂಡು ಬರುತ್ತಿದ್ದ ಮಂದಾರ ಟ್ರಾವೆಲ್ಸ್ ಬಸ್ಸಿನಲ್ಲಿ ಖಚಿತ ಮಾಹಿತಿಯನ್ನಾಧರಿಸಿ ಅನಮೋಡ ಅಬಕಾರಿ ತನಿಖಾ ಠಾಣೆಯ ಹತ್ತಿರ ಪರಿಶೀಲನೆ ನಡೆಸಿದಾಗ ಅಕ್ರಮ ಮದ್ಯ ಸಾಗಾಟ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ವಾಹನದಲ್ಲಿದ್ದ 66.750 ಲೀ ಅಕ್ರಮ ಗೋವಾ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಂಡು, ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಬೆಂಗಳೂರಿನ ಸೋಮನಹಳ್ಳಿ ನಿವಾಸಿ ಸುಪ್ರೀತ್.ಎಂ. ಮಂಜುನಾಥ್.ಬಿ.ಎಚ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ಮದ್ಯ ಹಾಗೂ ವಾಹನದ ಬೆಲೆ 45,57,000/-ಎಂದು ಅಂದಾಜಿಸಲಾಗಿದೆ. ವಾಹನದ ಮಾಲೀಕನನ್ನು ಪತ್ತೆ ಹಚ್ಚುವ ಕಾರ್ಯವನ್ನು ಮುಂದುವರಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಟಿ.ನಾಗರಾಜಪ್ಪ, ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಜಗದೀಶ್.ಎನ್.ಕೆ ಅವರ ನಿರ್ದೇಶನದ ಮೇರೆಗೆ ಅಬಕಾರಿ ಉಪಾಧೀಕ್ಷಕರಾದ ಶಂಕರಗೌಡ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಶ್ರೀಕಾಂತ.ಬಿ.ಅಸೋದೆ ದಾಂಡೇಲಿ, ಸಿಬ್ಬಂದಿಗಳಾದ ಎಸ್.ಬಿ.ಬನ್ಸೋಡೆ, ಎಸ್.ಡಿ.ರಾಥೋಡ್, ಎನ್.ಜಿ.ಜೋಗಳೆಕರ, ಪೊಲೀಸ್ ಸಿಬ್ಬಂದಿಗಳಾದ ತನೋಜ್ ಬೈಲೂರ್, ಲಲಿತಾ ಹಳ್ಳಿ ಹಾಗೂ ಎಸ್.ಎಸ್.ಟಿ ತಂಡದ ರಾಹುಲ್ ಕಾನಮನಕರ, ಮಲ್ಲಸರ್ಜ ಬೇವಿನಕೊಪ್ಪ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!