Sunday, March 7, 2021

Latest Posts

ಅಕ್ರಮ ಗಣಿಗಾರಿಕೆ ಪ್ರಕರಣ| ಗಾಲಿ ಜನಾರ್ದನ ರೆಡ್ಡಿ ಪತ್ನಿ ಖುಲಾಸೆ: ವಿಶೇಷ ಕೋರ್ಟ್ ಆದೇಶ ಪುರಸ್ಕರಿಸಿದ ಹೈಕೋರ್ಟ್

 ಹೊಸದಿಗಂತ ವರದಿ, ಬಳ್ಳಾರಿ:

ಅಸೋಸಿಯೇಟೆಡ್ ಮೈನಿಂಗ್ ಕಂಪನಿ ನಡೆಸಿದ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಕೈಬಿಟ್ಟಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ‌.
ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಅವರ ನೇತೃತ್ವದ ಏಕ ಸದಸ್ಯ ಪೀಠ, ಈ ಆದೇಶ ನೀಡಿದೆ ಎಂದು ತಿಳಿದು‌ ಬಂದಿದೆ.
ವಿಭಾಗೀಯ ಪೀಠ ತನ್ನ ತೀರ್ಪಿನಲ್ಲಿ ಅರುಣಾ‌ಲಕ್ಷ್ಮೀ ಅವರು ಅಸೋಸಿಯೇಟೇಡ್ ಮೈನಿಂಗ್ ಕಂಪನಿಯ ದಾಖಲೆಗೆ ಸಹಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ಅವರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಹೀಗಾಗಿ, ಪ್ರಕರಣದಿಂದ ಲಕ್ಷ್ಮಿ ಅರುಣಾ ಅವರ ಹೆಸರು ಕೈಬಿಟ್ಟ ಸಿಬಿಐ ನ್ಯಾಯಾಲಯದ ಆದೇಶ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಹಿನ್ನೆಲೆ: ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಬಿಐ ತನ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಇದರಲ್ಲಿ ಜನಾರ್ದನ ರೆಡ್ಡಿ ಅವರು ಮೊದಲನೆ ಆರೋಪಿಯಾಗಿದ್ದರೆ, ಅವರ ಪತ್ನಿ ಲಕ್ಷ್ಮಿ ಅರುಣಾ ಅವರು ಎರಡನೇ ಆರೋಪಿಯಾಗಿದ್ದರು. ಇದನ್ನು ಪ್ರಶ್ನಿಸಿ ಲಕ್ಷ್ಮಿ ಅರುಣಾ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅಸೋಸಿಯೇಟೆಡ್ ಕಂಪನಿಗೆ ತಾವು ಮಾಲೀಕರಲ್ಲ. ಅದರ ಉಸ್ತುವಾರಿಯನ್ನು ಹೊಂದಿಲ್ಲ. ಪಾಲುದಾರಿಕೆ ಹೊಂದಿದ್ದೇವೆ ಎಂಬ ಕಾರಣಕ್ಕೆ ಕಂಪನಿ ಮೇಲಿನ ಆರೋಪವನ್ನು ತಮ್ಮ ಮೇಲೆ ಹೊರಿಸಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ಕೈ ಬಿಡಬೇಕು ಎಂದು ಮನವಿ ಮಾಡಿದ್ದರು. ಅವರ ಮನವಿ ಪುರಸ್ಕರಿಸಿದ್ದ ಸಿಬಿಐ ಕೋರ್ಟ್, ಆರೋಪಗಳನ್ನು ಕೈಬಿಟ್ಟು 2015ರ ಆ.8ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಹಿರೇಮಠ್ ಅವರು 2017ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss