Sunday, December 3, 2023

Latest Posts

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಭಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಗುರುವಾರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

ಹೊಸ ಮರಳು ನೀತಿ 2020 ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್ ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಕಾಪಾಡಬೇಕಿದೆ . ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್ ಗಳಿಗ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!