Thursday, September 18, 2025

ಅಕ್ರಮ ಗಣಿ ಗುತ್ತಿಗೆ ಪರವಾನಿಗೆ ಆರೋಪ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿ ವಜಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಗಣಿ ಗುತ್ತಿಗೆ ಪರವಾನಿಗೆಗೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಬೆಂಗಳೂರಿನ ಉದ್ಯಮಿ ಎಂ.ಪಿ ವೇಣುಗೋಪಾಲ ಎಂಬುವರು ಸಲ್ಲಿಸಲಾಗಿತ್ತು.

ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠವು ವಜಾಗೊಳಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.

ಇದನ್ನೂ ಓದಿ