ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್ ವಿನ್‌ಝೋ ಸಂಸ್ಥಾಪಕರಾದ ಸೌಮ್ಯ ಸಿಂಗ್ ರಾಥೋಡ್ ಮತ್ತು ಪವನ್ ನಂದಾರನ್ನು ಬಂಧಿಸಿದ್ದಾರೆ.
ಫೆಡರಲ್ ತನಿಖಾ ಸಂಸ್ಥೆಯ ವಲಯ ಕಚೇರಿಯಲ್ಲಿ ವಿಚಾರಣೆ ನಡೆಸಿದ ನಂತರ ಬೆಂಗಳೂರಿನಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅದೇ ರಾತ್ರಿ ಇಬ್ಬರನ್ನೂ ಬೆಂಗಳೂರಿನ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಒಂದು ದಿನದ ಕಸ್ಟಡಿಗೆ ಕಳುಹಿಸಿದೆ. ಅಧಿಕಾರಿಗಳ ಪ್ರಕಾರ, ವಿವರವಾದ ಆದೇಶಕ್ಕಾಗಿ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.

