ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ಮಲಿಕ್ ವಿರುದ್ಧ 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ನವಾಬ್ ಮಲಿಕ್ ಅವರ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಸಲ್ಲಿಸಲಾಗಿದೆ ಎಂದು ಇಡಿ ವಕೀಲರು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಪ್ರಕರಣಗಳ ವಿಶೇಷ ನ್ಯಾಯಾಲಯವು ದಾಖಲೆಗಳ ಪರಿಶೀಲನೆಯ ನಂತರ ಚಾರ್ಜ್‌ಶೀಟ್‌ ಅನ್ನು ಪರಿಶೀಲನೆಗೆ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯ(ಇಡಿ) ಫೆಬ್ರವರಿ 23 ರಂದು ನವಾಬ್ ಮಲಿಕ್ ಅವರನ್ನು ದಕ್ಷಿಣ ಮುಂಬೈನಲ್ಲಿರುವ ತನಿಖಾ ಸಂಸ್ಥೆಯ ಕಚೇರಿಯಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!