ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್​ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಮತ್ತೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಾಲಿವುಡ್​ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸೋಮವಾರ ಮತ್ತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (EOW)ವು ಸಮನ್ಸ್ ಜಾರಿ ಮಾಡಿದೆ.

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಆಗಿರುವ ಜಾಕ್ವೆಲಿನ್‌ಗೆ ಸೆಪ್ಟೆಂಬರ್ 14ರ ರಂದು ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಲಾಗಿದೆ.

ನಟಿಯು ಕೆಲವು ಕಾರಣಗಳನ್ನು ಉಲ್ಲೇಖಿಸಿ ತಮ್ಮ ವಿಚಾರಣೆಯನ್ನು 15 ದಿನಗಳ ಕಾಲ ಮುಂದೂವಂತೆ ಕೇಳಿಕೊಂಡಿದ್ದರಿಂದ ದೆಹಲಿ ಪೊಲೀಸರು ಇಂದು (ಸೋಮವಾರ) ನಿಗದಿಯಾಗಿದ್ದ ವಿಚಾರಣೆಯನ್ನು ಮುಂದೂಡಿದ್ದಾರೆ.

ಆದರೆ, ನಟಿಯ ಮನವಿಯನ್ನು ತಿರಸ್ಕರಿಸಿರುವ ದೆಹಲಿ ಪೊಲೀಸರು ಹೆಚ್ಚು ಸಮಯ ನೀಡದೇ ಬರುವ ಬುಧವಾರ (ಸೆ.14) ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಮೂರನೇ ಸಮನ್ಸ್ ಆಗಿದ್ದು ತನಿಖೆಗೆ ಹಾಜರಾಗುವಂತೆ ಪೊಲೀಸರು ನಟಿ ಫರ್ನಾಂಡಿಸ್‌ಗೆ ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ಇಒಡಬ್ಲ್ಯೂ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಜರಾಗುವಂತೆ ಅವರಿಗೆ ಹೊಸದಾಗಿ ಸಮನ್ಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!