ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳ ಸಿಎಂ ಪಿಣರಾಯಿ ಪುತ್ರಿ ವಿರುದ್ಧ ದೂರು ದಾಖಲಿಸಿಕೊಂಡ ಇಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್ ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ದೂರು ದಾಖಲಿಸಿದೆ.

ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಭಾಗಿಯಾಗಿರುವವರಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

2018-19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್‌ ಹಾಗೂ ರುಟೈಲ್ ಲಿಮಿಟೆಡ್‌ ಎನ್ನುವ ಕಂಪನಿಗಳು ವೀಣಾ ಅವರ ಎಕ್ಸಲಾಜಿಕ್ ಸೆಲ್ಯೂಷನ್‌ನಿಂದ ಯಾವುದೇ ಸೇವೆ ಪಡೆಯದಿದ್ದರೂ ₹1.72 ಕೋಟಿ ಹಣವನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!