ಅಕ್ರಮ ಹಣ ವರ್ಗಾವಣೆ ಪ್ರಕರಣ: ನ. 9ರವರೆಗೆ ಸಂಜಯ್ ರಾವುತ್ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಜಾಮೀನು ಅರ್ಜಿಯ ಆದೇಶವನ್ನು ಮುಂಬಯಿ ವಿಶೇಷ ಪಿಎಂಎಲ್​​ಎ ನ್ಯಾಯಾಲಯವು ಬುಧವಾರ ಕಾಯ್ದಿರಿಸಿದೆ.ನವೆಂಬರ್ 9 ರಂದು ಆದೇಶ ಪ್ರಕಟಿಸುವುದಾಗಿ ಹೇಳಿದೆ.

ಹೀಗಾಗಿ ನವೆಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎಂ ಜಿ ದೇಶಪಾಂಡೆ ಜಾಮೀನು ಅರ್ಜಿಯ ಆದೇಶವನ್ನು ನವೆಂಬರ್ 9 ರಂದು ಹೊರಡಿಸುವುದಾಗಿ ಹೇಳಿದರು.

ಉಪನಗರ ಗೋರೆಗಾಂವ್ ಪ್ರದೇಶದಲ್ಲಿನ ಪತ್ರಾ ಚಾಲ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಅಕ್ರಮಗಳಲ್ಲಿ ಅವರ ಪಾತ್ರವಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಈ ವರ್ಷದ ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!