ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭೂ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರ್ಖಂಡ್ ಸಿಎಂ ಹೇಮಂತ್ 7ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿಗೊಳಿಸಿದೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ 6 ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಏಳನೇ ಸಮನ್ಸ್ ನೀಡಿದೆ.
ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಿಸೋದಕ್ಕೆ, ತಮ್ಮ ಆಯ್ಕೆಯ ಸ್ಥಳವನ್ನು ಆಯ್ಕೆ ಮಾಡಿ ಎರಡು ದಿನಗಳಲ್ಲಿ ಸಂಸ್ಥೆಗೆ ತಿಳಿಸುವಂತೆ ಕೇಳಿದೆ.
ಈ ಸಮನ್ಸ್ ಅನ್ನು ಶುಕ್ರವಾರ ಕಳುಹಿಸಲಾಗಿದೆ. ಭಾನುವಾರದ ವೇಳೆಗೆ ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಎರಡೂ ಕಡೆಯವರಿಗೆ ಸೂಕ್ತವಾದ ಸ್ಥಳದ ಬಗ್ಗೆ ಏಜೆನ್ಸಿಗೆ ತಿಳಿಸುವ ನಿರೀಕ್ಷೆಯಿದೆ. ಸಮನ್ಸ್ ಹೊರಡಿಸಿದ ದಿನದಿಂದ ಏಳು ದಿನಗಳಲ್ಲಿ ಹೇಳಿಕೆಯನ್ನು ದಾಖಲಿಸಬೇಕು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.