ಅಕ್ರಮ ಹಣ ವರ್ಗಾವಣೆ ಪ್ರಕರಣ: ತೀರ್ಪು ಮರುಪರಿಶೀಲನೆಗೆ ಒಪ್ಪಿಗೆ ಸೂಚಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ವಿರುದ್ಧದ ಕಠಿಣ ಕಾನೂನಿನ ಬಗ್ಗೆ ಇತ್ತೀಚೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್, ಈಗ ಮತ್ತೆ ಪುನರ್‌ಪರಿಶೀಲನೆಗೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಈ ಬಗ್ಗೆ ನೀಡಲಾದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿಸಿದೆ. ಈ ಹಿನ್ನೆಲೆಯಲ್ಲಿ (ಗುರುವಾರ) ಇಂದು ಅಕ್ರಮ ಹಣ ವರ್ಗಾವಣೆ ವಿರುದ್ಧದ ಕಠಿಣ ಕಾನೂನಿನ ವಿಚಾರಣೆ ನಡೆಯಲಿದೆ.

ಜಾರಿ ನಿರ್ದೇಶನಾಲಯಕ್ಕಿರುವ (ಇಡಿ) ಶೋಧನೆ, ಜಪ್ತಿ ಮತ್ತು ಬಂಧನದಂತಹ ಅಧಿಕಾರಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳ ಸಲ್ಲಿಕೆಯಾಗಿದ್ದವು. ಅಲ್ಲದೆ, ಈ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಮುಖ್ಯವಾಗಿ ವಿಪಕ್ಷ ನಾಯಕರು ಭಾಗಿಯಾಗಿರುವ ಪ್ರಕರಣಗಳಲ್ಲಿ ಹೆಚ್ಚಾಗಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಕಳೆದ ತಿಂಗಳಿನ ತನ್ನ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯ ಇಡಿ ನೀಡಲಾಗಿರುವ ಅಧಿಕಾರಗಳನ್ನು ಎತ್ತಿಹಿಡಿದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!