Monday, September 8, 2025

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮತ್ತು ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳಿಂದ ಬಂಧನವಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ವೀರೇಂದ್ರ ಪಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.

ಇದನ್ನೂ ಓದಿ