ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದ ಲ್ಲಿ ಮಾಜಿ ಸಚಿವ ಆನಂದ್ ಸಿಂಗ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಗೋವಾ ಮಾಜಿ ಸಚಿವ ರೋಹನ್ ಕೌಂಟೆ ಸೇರಿದಂತೆ 16 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಆನಂದ್ ಸಿಂಗ್, ಗೋವಾ ಸಚಿವ ರೋಹನ್ ಕೌಂಟೆ ಆರೋಪಿಯಾಗಿದ್ದರು. ಈ ಪ್ರಕರಣ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇಂದು ಆನಂದ್ ಸಿಂಗ್ ಅವರನ್ನು ಕೇಸ್ನಿಂದ ಖುಲಾಸೆಗೊಂಡಿದ್ದಾರೆ.
ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಸಿ ವರದಿ ಆಧರಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿತ್ತು. 16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ, ಜೈಸಿಂಗ್‌ಪುರದ ಬಳಿ ಎಸ್‌ವಿಕೆ ಫ್ಲಾಟ್‌ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ 2015ರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಡಿವೈಎಸ್ಪಿ ವೇಣುಗೋಪಾಲ್ ನೇತೃತ್ವದ ತಂಡ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ಚಿಚಾರಣೆ ಕಾಯ್ದಿರಿಸಿತ್ತು.