Thursday, December 25, 2025

ಅಕ್ರಮ ಅದಿರು ಸಾಗಣೆ ಪ್ರಕರಣ; ಶಾಸಕ ಸತೀಶ್‌ ಸೈಲ್‌ ವೈದ್ಯಕೀಯ ಜಾಮೀನು ಮತ್ತೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಆರೋಪಕ್ಕೆ ಸಂಬಂಧಿಸಿ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಗೆ ನೀಡಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಮತ್ತೆ ವಿಸ್ತರಣೆಯಾಗಿದೆ. ನ.20ರವರೆಗೆ ಜಾಮೀನು ವಿಸ್ತರಿಸಿ ಹೈಕೋರ್ಟ್‌ ಆದೇಶಿಸಿದೆ.

ವಿಚಾರಣೆ ವೇಳೆ ಸತೀಶ್ ಸೈಲ್ ಆರೋಗ್ಯ ಸ್ಥಿತಿ ಬಗ್ಗೆ ಸ್ವತಂತ್ರ ಪರಿಶೀಲನೆ ನಡೆಸಲಾಗಿದ್ದು, ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದೆ ಎಂದು ಇಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

ಈ ವೇಳೆ ಸತೀಶ್ ಸೈಲ್‌ರ ವೈದ್ಯಕೀಯ ದಾಖಲೆಗಳನ್ನು ಒದಗಿಸಲಾಗುವುದು. ಲಿವರ್ ಕಸಿಯ ಅಗತ್ಯವಿದೆ ಎಂಬ ವೈದ್ಯಕೀಯ ವರದಿ ಇದೆ ಎಂದು ಹೈಕೋರ್ಟ್‌ಗೆ ಸತೀಶ್ ಸೈಲ್ ಪರ ವಕೀಲರು ಮಾಹಿತಿ ನೀಡಿದರು. ನ.15 ರಂದು ಬೆಳಗ್ಗೆ 11.30ಕ್ಕೆ ಆಸ್ಪತ್ರೆಗೆ ಸತೀಶ್ ಸೈಲ್‌ಗೆ ಹಾಜರಾಗಲು ಹೈಕೋರ್ಟ್ ಸೂಚನೆ ನೀಡಿದ್ದು, ಬಳಿಕ ನವೆಂಬರ್ 20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿ ಆದೇಶ ಹೋರಡಿಸಿದೆ.

error: Content is protected !!