ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧದ ತನಿಖೆಗೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್(supreme court) ಸೂಚಿಸಿದೆ.
ಇಂದು (ಶುಕ್ರವಾರ) ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಹೈಕೋರ್ಟ್‌ನಲ್ಲಿ(Karnataka High Court) ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚಿಸಿದೆ.
ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ತನಿಖೆಗೆ ನೀಡಿರಲಿಲ್ಲ. ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ತಡೆ ರದ್ದು ಕೋರಿ ಈಗಾಗಲೇ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ವಾದ ಆಲಿಸಿದ ಪೀಠ ಈಗಾಗಲೇ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಹಿನ್ನೆಲೆ ವಿಚಾರಣೆ ಅಲ್ಲೇ ಮುಂದುವರಿಸಿ, ಪ್ರಕರಣವನ್ನು ಪ್ರಸ್ತಾಪಿಸಿ ನಾವು ಅರ್ಜಿ ಇತ್ಯರ್ಥಪಡಿಸಲು ಹೈಕೋರ್ಟ್‌ಗೆ ನಿರ್ದೇಶನ ನೀಡುತ್ತಿದ್ದೇವೆ ಎಂದು ಆದೇಶಿಸಿದರು.