ಹೊಸದಿಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿದೆ.
ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಜನವರಿ 11, 2024 ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.
ಸಿಆರ್ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್ನಲ್ಲಿ, ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಕೇಳಿದೆ.
ಶಿವಕುಮಾರ್ ಅವರ ಪುತ್ರ ಮತ್ತು ಇತರ ಕುಟುಂಬ ಸದಸ್ಯರು ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಪ್ರಸ್ತುತಪಡಿಸುವಂತೆ ಸಿಬಿಐ ಕೇಳಿದೆ. ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ ಎಸ್ ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ.