ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ ಸಂದೇಶ ರವಾನಿಸಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29ರಂದು ಹೈಕೋರ್ಟ್ ತಿರಸ್ಕರಿಸಿತ್ತು.ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು.

ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಯತ್ನಾಳ್, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!